ಸೆಪ್ಟೆಂಬರ್ ತಿಂಗಳ ಬಳಿಕ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಇದೇ ಮೊದಲ ಬಾರಿಗೆ ಬರೋಬ್ಬರಿ 89,129 ಹೊಸ ಕೊರೊನಾ ಕೇಸ್ಗಳು ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,23,92,260ರಷ್ಟಾಗಿದೆ.
ಕಳೆದ ಮೂರು ವಾರಗಳಿಂದ ದೇಶದಲ್ಲಿ ಕೊರೊನಾ ಕೇಸ್ಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಲೇ ಇದೆ. ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಕೇರಳ, ಚತ್ತೀಸಗಢ, ಚಂಡೀಗಢ, ಗುಜರಾತ್, ಮಧ್ಯ ಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಹರಿಯಾಣದಲ್ಲಿ ಕೊರೊನಾ ಕೇಸ್ಗಳು ಏರಿಕೆ ಕಂಡಿದೆ.
ಕಳೆದ ವರ್ಷ ಸೆಪ್ಟೆಂಬರ್ 16ರಂದು ದೇಶದಲ್ಲಿ ಒಂದೇ ದಿನ ಬರೋಬ್ಬರಿ 97,894 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಇದಾದ ಬಳಿಕ ಶುಕ್ರವಾರ ಕೊರೊನಾ ಕೇಸ್ 89 ಸಾವಿರ ಗಡಿ ದಾಟಿದೆ.
ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,58,909 ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 714 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 1,64,110 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1,15,69,241 ರಷ್ಟಿದೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 24,69,59,192 ಸ್ಯಾಂಪಲ್ಗಳ ಪರೀಕ್ಷೆ ಮಾಡಲಾಗಿದ್ದು ಇದರಲ್ಲಿ 10,46,605 ಸ್ಯಾಂಪಲ್ಗಳ ವರದಿ ಶುಕ್ರವಾರ ಪ್ರಕಟವಾಗಿದೆ.