ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶದ ಬಗ್ಗೆ ಏಕಾಏಕಿ ನಿಯಮ ಜಾರಿ ಮಾಡಿ ಸ್ಯಾಂಡಲ್ ವುಡ್ ಆಕ್ರೋಶಕ್ಕೆ ಗುರಿಯಾಗಿರುವ ಆರೋಗ್ಯ ಸಚಿವ ಸುಧಾಕರ್, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಸಚಿವನಾಗಿ ನನ್ನ ಕೆಲಸ ನಾನು ಮಾಡಿದ್ದೇನೆ ರಾಜ್ಯದ ಜನರ ಆರೋಗ್ಯ ರಕ್ಷಣೆ ನನ್ನ ಕರ್ತವ್ಯ ಎಂದು ಹೇಳಿದ್ದಾರೆ.
ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಕೆಲವರು ನನ್ನ ಟೀಕಿಸುತ್ತಿದ್ದಾರೆ. ಆದರೆ ಈ ಬಗ್ಗೆ ನನಗೆ ಬೇಜಾರಿಲ್ಲ. ನಿರ್ಮಾಪಕ ಕೆ.ಮಂಜು ಯಾರೆಂಬುದೂ ನನಗೆ ಗೊತ್ತಿಲ್ಲ. ಅವರ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಆರೋಗ್ಯ ಸಚಿವನಾಗಿ ನನಗೆ ರಾಜ್ಯದ ಜನರ ಸುರಕ್ಷತೆ ಮುಖ್ಯ. ಈ ನಿಟ್ಟಿನಲ್ಲಿ ನಾನು ನನ್ನ ಕೆಲಸ ಮಾಡಿದ್ದೇನೆ ಎಂದರು.
ಸಿಡಿ ಲೇಡಿ ಜೊತೆ ಮತ್ತೋರ್ವ ಮಾಜಿ ಸಚಿವರ ನಂಟು; ಸುಧಾಕರ್ ಹೇಳಿದ್ದೇನು…?
ಪ್ರಸ್ತುತ ಮೂರು ದಿನಗಳ ಕಾಲ ಚಿತ್ರಮಂದಿರಗಳಿಗೆ ಶೇ.100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ನೀಡಿರುವ ಸಿಎಂ ನಿರ್ಧಾರವನ್ನೂ ತಪ್ಪು ಎಂದು ನಾನು ಹೇಳಲ್ಲ. ಆದರೆ ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೆ ಸಮಸ್ಯೆಯಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಲೇ ಇದೆ. ಜನರ ಜೀವ, ಜೀವನೋಪಾಯ ಎರಡೂ ನಮಗೆ ಮುಖ್ಯ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂದು ಹೇಳಿದರು.