ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೆಐಎಡಿಬಿ 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಂಬುವವರು ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶ ನೀಡಿತ್ತು.
ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಇದೀಗ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹಾಗಾಗಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿಗೆ ರಿಲೀಫ್ ಸಿಕ್ಕಂತಾಗಿದೆ.