ಮೈಸೂರು: ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಏಪ್ರಿಲ್ 20 ರವರೆಗೆ ವಿಸ್ತರಿಸಲಾಗಿದೆ.
ಪೋಷಕರ ವಾರ್ಷಿಕ ವರಮಾನ 2.5 ಲಕ್ಷದೊಳಗಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ www.ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಲು ಆದಿಪಂಪ ರಸ್ತೆ ಒಂಟಿಕೊಪ್ಪಲ್ ಪೂರ್ವ ಬಡಾವಣೆ ಪಡುವಾರಳ್ಳಿ ಡಾ. ಬಾಬು ಜಗಜೀವನ್ ಭವನ ಕಟ್ಟಡದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ. ಸಂ: 0821-2520910ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.