ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದ್ದು, ಕೆಲವೊಂದು ದಿನ ಸೋಂಕಿನ ಪ್ರಕರಣಗಳು ಲಕ್ಷವನ್ನು ಸಮೀಪಿಸುತ್ತಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದೆ ಎನ್ನಲಾಗಿದ್ದು, ಇದು ದೇಶವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ಕೆಲವೊಂದು ರಾಜ್ಯ ಸರ್ಕಾರಗಳು ಕಠಿಣ ನಿರ್ಬಂಧಗಳನ್ನು ಹೇರುತ್ತಿದ್ದು, ಅಗತ್ಯ ಬಿದ್ದರೆ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸಲು ಹಿಂಜರಿಯುವುದಿಲ್ಲ ಎಂಬ ಸಂದೇಶವನ್ನು ನೀಡುತ್ತಿವೆ. ಜನರ ನಿರ್ಲಕ್ಷವೂ ಕೊರೊನಾ ಸೋಂಕು ಏರಿಕೆಗೆ ಕಾರಣವೆಂದು ಹೇಳಲಾಗುತ್ತಿದೆ.
ಕೋವಿಡ್ ಲಸಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಮಹತ್ವದ ಸೂಚನೆ
ಇದರ ಮಧ್ಯೆ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು ಮುಂದಿನ ನಾಲ್ಕು ವಾರಗಳ ಅವಧಿ ಗಂಭೀರ ಮತ್ತು ನಿರ್ಣಾಯಕವಾಗಿದೆ ಎಂದು ತಿಳಿಸಿದೆ. ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿದರೆ ಪರಿಸ್ಥಿತಿ ಮತ್ತಷ್ಟು ಕಠಿಣವಾಗಲಿದೆ ಎಂದು ತಿಳಿಸಲಾಗಿದೆ. ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪಾಲ್ ಸಹ ಕೊರೊನಾ ತಡೆಗಟ್ಟಲು ಜನರ ಸಹಭಾಗಿತ್ವ ಬಹುಮುಖ್ಯ ಎಂದು ತಿಳಿಸಿದ್ದಾರೆ.