ಉದ್ಯೋಗ ಬಯಸುವ ಯುವಕರಿಗೆ ಖುಷಿ ಸುದ್ದಿಯೊಂದಿದೆ. ಭಾರತೀಯ ವಾಯುಪಡೆಯು ಸ್ಟೆನೋಗ್ರಾಫರ್, ಸೀನಿಯರ್ ಕಂಪ್ಯೂಟರ್ ಆಪರೇಟರ್, ಕುಕ್, ಹೌಸ್ ಕೀಪಿಂಗ್ ಸ್ಟಾಫ್, ಎಂಟಿಎಸ್, ಎಲ್ಡಿಸಿ, ಸಿಎಸ್ ಮತ್ತು ಎಸ್ಎಂಡಬ್ಲ್ಯು, ಕಾರ್ಪೆಂಟರ್, ಲಾಂಡ್ರಿಮನ್, ಹಿಂದಿ ಟೈಪಿಸ್ಟ್ ಸೇರಿದಂತೆ ಒಟ್ಟು 1524 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ವಾಯುಪಡೆಯ indianairforce.nic.in ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯ ಕೊನೆಯ ದಿನಾಂಕ ಮೇ 2. ಭಾರತೀಯ ವಾಯುಪಡೆಯ ಅಧಿಕೃತ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿದರೆ ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಲಭ್ಯವಾಗಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮೆಕ್ಯಾನಿಕಲ್ ಟ್ರಾನ್ಸ್ ಪೋರ್ಟ್ ಡ್ರೈವರ್, ಕುಕ್, ಪೇಂಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಆಗಿರಬೇಕು. ಲೋವರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್, ಹಿಂದಿ ಟೈಪಿಸ್ಟ್ ಮತ್ತು ಸ್ಟೋರ್ ಕೀಪರ್ ಹುದ್ದೆಗೆ 12ನೇ ತರಗತಿ ಪಾಸ್ ಆಗಿರಬೇಕು. ಹಿರಿಯ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಪದವಿ ಪಡೆದಿರಬೇಕಾಗುತ್ತದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ನಂತ್ರ ಲಿಖಿತ ಪರೀಕ್ಷೆ ನಡೆಯಲಿದೆ. ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.