ಬೆಳಗಾವಿ: ರಾಜ್ಯ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಅವರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಆದರೂ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ. ಸ್ವಾರ್ಥಕಾಗಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಪತ್ನಿಗೆ ಆರ್ಥಿಕ ನೆರವು ನೀಡುವುದು ಪತಿ ಕರ್ತವ್ಯ, ಹೈಕೋರ್ಟ್ ಮಹತ್ವದ ತೀರ್ಪು
ಖಾಸಗಿ ವಾಹನದವರು ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಮಾತುಕತೆಗೆ ಬಂದರೆ ನಾನು ಚರ್ಚಿಸಲು ಸಿದ್ಧ. ಜನರಿಗಾಗುತ್ತಿರುವ ತೊಂದರೆಯನ್ನು ಲಕ್ಷಿಸದೇ ಪ್ರತಿಭಟನೆ ನಡೆಸುವುದು ಸರಿಯಲ್ಲ. ಈಗಾಗಲೇ ಎಸ್ಮಾ ಜಾರಿ ಬಗ್ಗೆಯೂ ಚರ್ಚೆ ನಡೆದಿದೆ. ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.