ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕೋತ್ತರ ಪದವಿ, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್ಡಬ್ಲ್ಯೂ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000 ರೂ.ನಿಂದ 1,50,000 ರೂ. ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 28,2021ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ವಿಳಾಸ: The Commissioner, Rural drinking water and sanitation department, 2nd floor, KHB complex, Cauvery bhavan, K.G.. Road, Bengaluru-560 009.