alex Certify BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.

10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು.

ವಿಜಯಪುರದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಲಾಗಿದ್ದು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಏಪ್ರಿಲ್ 8 ರಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...