alex Certify BIG NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮ – 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮ – 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಕಠಿಣ ನಿಯಮ ಜಾರಿಗೊಳಿಸಲಾಗಿದೆ. 8 ನಗರಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 10 ರಿಂದ 10 ದಿನಗಳ ಕಾಲ ಜಾರಿಯಲ್ಲಿರುತ್ತದೆ.

ಪ್ರಧಾನಿ ಮೋದಿಯವರೊಂದಿಗೆ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ 10 ರಿಂದ 20 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ,-ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೋನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮತ್ತೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ರಾತ್ರಿ ವೇಳೆ ಜನರ ಓಡಾಟಕ್ಕೆ ನಿರ್ಬಂಧ ಇರುತ್ತದೆ. ಮದುವೆ ಸಮಾರಂಭಗಳಿಗೆ ಇತಿ ಮಿತಿ ಇರಬೇಕು. ಜನರು ಹೊರಗೆ ಓಡಾಡುವಂತಿಲ್ಲ.10 ಗಂಟೆಯ ಒಳಗೆ ವ್ಯಾಪಾರ-ವಹಿವಾಟು ಬಂದ್ ಮಾಡಬೇಕು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...