ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಘೋಷಿಸಲಾಗಿದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದಾರೆ.
ಬೆಂಗಳೂರು, ಮೈಸೂರು, ಉಡುಪಿ-ಮಣಿಪಾಲ, ಮಂಗಳೂರು, ತುಮಕೂರು, ಬೀದರ್, ಕಲಬುರ್ಗಿಯಲ್ಲಿ ಏಪ್ರಿಲ್ 10 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನಿರ್ಬಂಧ ವಿಧಿಸಲಾಗಿದೆ. ಪ್ರಾಯೋಗಿಕವಾಗಿ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಇಡೀ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ.