alex Certify BIG NEWS: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 5  ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಲಿವೆ. ಈ ಕಾರಣದಿಂದ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಏಪ್ರಿಲ್ 9 ರಿಂದ 13 ರವರೆಗೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ.

ಚಾಮರಾಜನಗರ, ರಾಮನಗರ, ಮೈಸೂರು ಭಾಗದಲ್ಲಿ 4 ದಿನ ಮತ್ತು ಬೆಳಗಾವಿ, ಧಾರವಾಡ, ಕಲ್ಬುರ್ಗಿಯಲ್ಲಿ ಏಪ್ರಿಲ್ 9 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...