ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 3220 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,77,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 46 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳು ಇದ್ದು, 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದು, 42,525 ಸಕ್ರಿಯ ಪ್ರಕರಣಗಳಿವೆ.