ಬೆಂಗಳೂರು: ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಒಪ್ಪಿಗೆ ಪಡೆಯದೆ ಹಾಡುಗಳನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ರಿಷಬ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಲಹರಿ ಮ್ಯೂಸಿಕ್ ಸಂಸ್ಥೆ ದಾಖಲಿಸಿದ್ದ ಪ್ರಕರಣದಲ್ಲಿ ‘ಕಿರಿಕ್ ಪಾರ್ಟಿ’ ಚಿತ್ರತಂಡದ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ 9ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
2016 ರಲ್ಲಿ ತೆರೆಕಂಡಿದ್ದ ‘ಕಿರಿಕ್ ಪಾರ್ಟಿ’ಯಲ್ಲಿ ಲಹರಿ ಕಂಪನಿ ಹಾಡುಗಳನ್ನು ಅನುಮತಿ ಪಡೆಯದೆ ಬಳಕೆ ಮಾಡಲಾಗಿದೆ ಎಂದು ಕಾಪಿರೈಟ್ಸ್ ಕಾಯ್ದೆ ಅನ್ವಯ ಎಸಿಎಂಎಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ 8 ಬಾರಿ ನೋಟಿಸ್ ನೀಡಿದ್ದರೂ ಚಿತ್ರತಂಡ ವಿಚಾರಣೆಗೆ ಹಾಜರಾಗಿರಲಿಲ್ಲ. ಮುಂದಿನ ವಿಚಾರಣೆಯನ್ನು ಮೇ 27 ಕ್ಕೆ ಮುಂದೂಡಲಾಗಿದ್ದು, ಇಡೀ ಚಿತ್ರತಂಡವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ಇಲಾಖೆ ನಿರ್ದೇಶಿಸಲಾಗಿದೆ.