ದಾವಣಗೆರೆ: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಿವಿಗೆ ಹೂವಿಡುತ್ತಿದ್ದಾರೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.
ವಾಲ್ಮೀಕಿ ಸಮುದಾಯಕ್ಕೆ ಶೇಕಡ 7.5 ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ ಸಮಾಜದವರ ಕಿವಿಯ ಮೇಲೆ ಸಿಎಂ ಹೂವಿಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿದವರನ್ನು ಸನ್ಮಾನಿಸಿ ಮಾತನಾಡಿದ ಸ್ವಾಮೀಜಿ, ರಾಜನಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದಾಗ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ರಚಿಸಲಾಗಿದ್ದು, ಸಮಮಿತಿ ಜುಲೈನಲ್ಲೇ ವರದಿ ನೀಡಿದೆ. ಮತ್ತೆ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ. ಬಳಿಕ ಮೂರು ಸದಸ್ಯರ ಉನ್ನತ ಸಮಿತಿಯನ್ನು ಸರ್ಕಾರ ರಚಿಸಿದೆ. ಇದನ್ನು ರಚಿಸುವ ಅವಶ್ಯಕತೆ ಇದೆಯೇ? ಯಾವ ಪ್ರಜ್ಞಾವಂತರು ಇದನ್ನು ಒಪ್ಪುವುದಿಲ್ಲ. ಮೀಸಲಾತಿ ವಿಚಾರದಲ್ಲಿ ಸಿಎಂ ಕಿವಿಗೆ ಹೂವಿಡುತ್ತಿದ್ದಾರೆ ಎಂದು ಹೇಳಿದ್ದಾರೆ.