ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,45,384 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 794 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 10,46,631 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,19,90,859 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 77,567 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 9,80,75,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.