alex Certify IPL: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಮೊದಲ ಪಂದ್ಯದಲ್ಲೇ ರೋಚಕ ಗೆಲುವು ಕಂಡ RCB – ಇಲ್ಲಿದೆ ಪಂದ್ಯದ ಸ್ವಾರಸ್ಯಕರ ವಿಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಮೊದಲ ಪಂದ್ಯದಲ್ಲೇ ರೋಚಕ ಗೆಲುವು ಕಂಡ RCB – ಇಲ್ಲಿದೆ ಪಂದ್ಯದ ಸ್ವಾರಸ್ಯಕರ ವಿಚಾರ

ಚೆನ್ನೈ: ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ 4 ಓವರ್ ನಲ್ಲಿ ಕೇವಲ 27 ರನ್ ನೀಡಿ 5 ವಿಕೆಟ್ ಗಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಗೊಂಚಲು ಪಡೆದ ಮೊದಲ ಬೌಲರ್ ಎನ್ನುವ ದಾಖಲೆಗೆ ಹರ್ಷಲ್ ಪಟೇಲ್ ಅವರು ಪಾತ್ರರಾಗಿದ್ದಾರೆ.

ಈ ಪಂದ್ಯದಲ್ಲಿ ಹೊಸ ಪ್ರಯೋಗ ನಡೆಸಿದ ಆರ್ಸಿಬಿ ವಾಷಿಂಗ್ಟನ್ ಸುಂದರ್ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.

ಹಾಲಿ ಚಾಂಪಿಯನ್ ಮುಂಬೈ ಈ ಪಂದ್ಯದಲ್ಲಿ ಸೋಲುವ ಮೂಲಕ ಸತತ 9 ವರ್ಷ ಮೊದಲ ಪಂದ್ಯದಲ್ಲಿ ಸೋಲು ಕಂಡ ದಾಖಲೆ ಬರೆದಿದೆ.

ಈ ಪಂದ್ಯದಲ್ಲಿ ರನ್ ಹೊಳೆ ಹರಿಯದಿದ್ದರೂ ಕೊನೆವರೆಗೂ ರೋಚಕತೆಯಿಂದ ಕೂಡಿತ್ತು. ಮುಂಬೈ ವಿರುದ್ಧ ಕೊನೆ ಎಸೆತದಲ್ಲಿ RCB ಎರಡು ವಿಕೆಟ್ ಜಯ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...