ಉಪ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಯೂ ವಿಳಾಸ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ತುರುವಿಹಾಳದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ಎಲ್ಲಾ ಕಡೆ ಬಿಜೆಪಿ ಅಲೆ ಇದೆ. ಉಪ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಯೂ ವಿಳಾಸ ಇರುವುದಿಲ್ಲ ಎಂದು ಹೇಳಿದ್ದಾರೆ.
ಪ್ರತಾಪ್ ಗೌಡ ಪಾಟೀಲ್ ಅವರನ್ನು ಆಯ್ಕೆ ಮಾಡಿ. ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ಮಾಡಿಕೊಡಿ. ಚುನಾವಣೆ ನಂತರ ನಿಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನೀವೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಿ. 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಪ್ರತಾಪ್ ಗೌಡ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.