ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಆದರೂ ಕೂಡ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ನಾಲ್ಕು ದಿನಗಳ ಕಾಲ ದೇಶದಾದ್ಯಂತ ‘ಲಸಿಕೆ ಉತ್ಸವ’ವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.
ಮೊದಲ ದಿನದ ಕರ್ಫ್ಯೂ ಮುಕ್ತಾಯ: ಅನಗತ್ಯವಾಗಿ ಹೊರ ಬಂದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು
‘ಲಸಿಕೆ ಉತ್ಸವ’ದ ಸಂದರ್ಭದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದವರು ಗರಿಷ್ಠ ಪ್ರಮಾಣದಲ್ಲಿ ಲಸಿಕೆ ಪಡೆಯಬೇಕೆಂಬ ಉದ್ದೇಶವನ್ನು ಹೊಂದಲಾಗಿದೆ. ಗುರುವಾರದಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ‘ಲಸಿಕೆ ಉತ್ಸವ’ದ ವಿಚಾರ ಪ್ರಸ್ತಾಪಿಸಿದ್ದರು.