ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು, ಪ್ರತಿನಿತ್ಯ 5000ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸೋಂಕು ಹೆಚ್ಚಾಗಿರುವ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾಸ್ಕ್ ಧರಿಸಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.
ಇಂದು ನಡೆಯಬೇಕಿದ್ದ ಕೆ -ಸೆಟ್ ಪರೀಕ್ಷೆ ಮುಂದೂಡಿಕೆ
ಇದರ ಮಧ್ಯೆ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 13 ರಂದು ನಡೆಯಬೇಕಿದ್ದ ರಥೋತ್ಸವವನ್ನು ರದ್ದುಗೊಳಿಸಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆದೇಶಿಸಿದೆ.
ರಥೋತ್ಸವ ನಡೆದರೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಬಹುದು. ಇದರಿಂದ ಕೊರೊನಾ ಸೋಂಕು ಹೆಚ್ಚಳವಾಗಬಹುದೆಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.