ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ.
ಉಪ ಚುನಾವಣೆ ಮುಗಿದ ಎರಡು ದಿನಗಳ ನಂತರ ಹಾಸನದಲ್ಲಿ ಕಾರ್ಯಕಾರಿಣಿ ನಡೆಯಲಿದ್ದು, ಪಕ್ಷ ಮತ್ತು ಸರ್ಕಾರದ ಕಾರ್ಯವೈಖರಿ, ಸಂಘಟನೆ ಚಟುವಟಿಕೆಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರಮುಖವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಜ್ಯಪಾಲರಿಗೆ ಬರೆದ ಪತ್ರದ ವಿಚಾರ ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದರೊಂದಿಗೆ ಉಸ್ತುವಾರಿ ಸಚಿವರ ನೇಮಕಾತಿ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎನ್ನಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲಾದವರು ಭಾಗಿಯಾಗಲಿದ್ದಾರೆ.