ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬ್ಯಾಕೋಡ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ದಿಲ್ಶಾದ್ ರಫೀಕ್(26) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕುಟುಂಬದವರು ಆಂಬುಲೆನ್ಸ್ ನಲ್ಲಿ ಹೂವಿನಹಿಪ್ಪರಗಿ ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದಾರೆ. ಮಾರ್ಗ ಮತ್ತೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಆಂಬುಲೆನ್ಸ್ ನಲ್ಲಿದ್ದ ಶುಶ್ರೂಷಕ ಸಿಬ್ಬಂದಿ ರಮೇಶ್ ಮತ್ತು ಚಾಲಕ ಬಸವರಾಜಯ್ಯ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ದಿಲ್ಶಾದ್ ಅವರ ತಾಯಿ, ಮಕ್ಕಳು, ಮಗಳ ಆರೈಕೆ ಮಾಡಿದ್ದು ಬಳಿಕ ಹೂವಿನಹಿಪ್ಪರಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸಿದ್ದು, ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.