ಆಗ್ರಾ: ಉತ್ತರಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವಕನ ಖಾಸಗಿ ಅಂಗವನ್ನು ಇಬ್ಬರು ನಪುಂಸಕರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಯುವಕನ ಸಹೋದರಿ ಆಗ್ರಾದ ದೆಹಲಿ ಗೇಟ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳನ್ನು ಗುಡ್ಡಿ ಮತ್ತು ರಾಜ್ಜಿ ಎಂದು ಗುರುತಿಸಲಾಗಿದೆ.
ಮದುವೆ ಸಮಾರಂಭದಲ್ಲಿ ನೃತ್ಯ ಮಾಡುವ ಉದ್ದೇಶದಿಂದ ಅವರೊಂದಿಗೆ ಯುವಕ ತೆರಳಿದ್ದ. ಮರುದಿನ ರಸ್ತೆಯಲ್ಲಿ ಆತ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ಗುಡ್ಡಿ, ರಾಜ್ಜಿ ಇಬ್ಬರೂ ಸೇರಿಕೊಂಡು ಯುವಕನ ಖಾಸಗಿ ಅಂಗ ಕತ್ತರಿಸಿದ್ದಾರೆ. ಬಳಿಕ ಯುವಕ ತನ್ನ ಸಹೋದರಿಗೆ ಮಾಹಿತಿ ನೀಡಿದ್ದಾನೆ. ದೆಹಲಿ ಗೇಟ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಶಿಶ್ ಕುಮಾರ್ ಸಿಂಗ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ. ವಿಚಾರಣೆ ನಡೆಸಿದ್ದು ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಗಾಯಾಳು ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.