ದೇಶದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಪರಿಣಾಮ ಬೀರಿದ್ದು, ಇದರ ಹೊಡೆತ ಸುಪ್ರೀಂ ಕೋರ್ಟ್ಗೂ ತಟ್ಟಿದೆ.
ಸರ್ವೋಚ್ಛ ನ್ಯಾಯಾಲಯದ 50 ಪ್ರತಿಶತ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋರ್ಟ್ನ ಎಲ್ಲಾ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಲಾಗಿದೆ. ಶನಿವಾರ ಒಂದೇ ದಿನ 44 ಮಂದಿ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ. ಈ ಹಿನ್ನಲೆಯಲ್ಲಿ ಇನ್ನು ಮುಂದೆ ಮನೆಯಿಂದಲೇ ಕಲಾಪ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ನ ಬಹುತೇಕ ಎಲ್ಲಾ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರೊಬ್ಬರು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕಳೆದ ವಾರದಲ್ಲಿ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಕೊರೊನಾ ಸೋಂಕು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1,68,912 ಹೊಸ ಕೊರೊನಾ ಸೋಂಕು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 904 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.