ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದ್ದು, ಎಸ್ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೊಡೆದಿದ್ದಾಳೆ.
ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಯುವತಿ ಇದೀಗ ಇಡೀ ಪ್ರಕರಣದ ಬಗ್ಗೆ ಉಲ್ಟಾ ಹೊಡೆದಿದ್ದು, ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ರೀತಿ ಕೃತ್ಯ ಎಸಗಲಾಗಿದೆ. ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ಹನಿಟ್ರ್ಯಾಪ್ ಗೆ ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.
ತನಿಖಾಧಿಕಾರಿ ಕವಿತಾ ಮುಂದೆ ಸಂತ್ರಸ್ತ ಯುವತಿ ನೀಡಿದ ಹೇಳಿಕೆ ರೆಕಾರ್ಡ್ ಮಾಡಲಾಗಿದ್ದು, ಸಿಆರ್ಪಿಸಿ 161ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಿಡಿ ಲೇಡಿ ಈಗ ನೀಡಿದ ಹೇಳಿಕೆ ಮೇರೆಗೆ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ಯುವತಿಯನ್ನು ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಕೋರಿದ್ದಾರೆ ಎಂದು ತಿಳಿದುಬಂದಿದೆ.