ಬೆಂಗಳೂರು: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಯಾಣಿಕ ವಾಹನಗಳಿಗೆ ಪಾವತಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.
ಕರ್ನಾಟಕ ಮೋಟಾರು ವಾಹನ ಕಾಯ್ದೆ 1957 ರ ಅನ್ವಯ ನಿಯಮಗಳನ್ನು ಸಡಿಲಗೊಳಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ ಏಪ್ರಿಲ್ 15 ರೊಳಗೆ ಪಾವತಿ ಮಾಡಬೇಕಿದ್ದ ವಾಹನ ತೆರಿಗೆಯನ್ನು ಏಪ್ರಿಲ್ 30 ರ ವರೆಗೆ ದಂಡ ರಹಿತವಾಗಿ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.
ಹೊಸ ವಾಹನಗಳ ನೋಂದಣಿ ಹೊರತುಪಡಿಸಿ ಎಲ್ಲ ನೊಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ತೆರಿಗೆ ಪಾವತಿ ಅವಧಿ ವಿಸ್ತರಿಸಲಾಗಿದೆ.