ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11,265 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,94,912 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 4364 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,96,367 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 85,480 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವತ್ತು 38 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,046 ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 8155 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 23 ಜನ ಸೋಂಕಿತರು ಮೃತಪಟ್ಟಿದ್ದು, 63,167 ಸಕ್ರಿಯ ಪ್ರಕರಣಗಳಿವೆ.