ಕಲಬುರ್ಗಿ ನಗರದ ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಪಕ್ಕದ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಒಬ್ಬರು ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಆನಂದ್ ಪ್ರಸಾದ್ ಹೃದಯಾಘಾತದಿಂದ ಮೃತಪಟ್ಟ ಹೆಡ್ ಕಾನ್ಸ್ ಟೇಬಲ್ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಆನಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸೋಂಕಿನ ಲಕ್ಷಣಗಳಿದ್ದ ಅವರಿಗೆ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದೇ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರೊಬ್ಬರು ಎರಡು ದಿನಗಳ ಹಿಂದೆ ನರಳಿ ನರಳಿ ಮೃತಪಟ್ಟಿದ್ದಾರೆ. ಇದನ್ನು ಗಮನಿಸಿದ ಆನಂದ್ ತೀವ್ರ ಅಘಾತಕ್ಕೆ ಒಳಗಾಗಿ ಮನೆಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಆತಂಕದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಅವರ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಎಂದು ಹೇಳಲಾಗಿದೆ.