ಬೆಂಗಳೂರು: ದೇಶದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಜೋರಾಗಿದೆ. ಇದೇ ವೇಳೆ ಲಸಿಕೆ ಅಭಿಯಾನ ನಡೆಯುತ್ತಿದ್ದು, 45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, 45 ವರ್ಷದೊಳಗಿನವರಿಗೆ ಲಸಿಕೆ ನೀಡಿಕೆ ಆರಂಭಿಸುವ ಕುರಿತು ಸುಳಿವು ನೀಡಿದ್ದಾರೆ. ಕೇಂದ್ರ ಸರ್ಕಾರ 45 ವರ್ಷದೊಳಗಿನವರಿಗೆ ಲಸಿಕೆ ನೀಡುವ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೇಶದಲ್ಲಿ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿವೆ. ಈಗಾಗಲೇ ಸುಮಾರು 12 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.