ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿಸುವ ಕುರಿತು ಒಲವು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯೊಂದನ್ನು ಅವರು ಸಿದ್ಧಪಡಿಸಿದ್ದು, ಆದರೆ ಅದು ಮಂಡನೆಯಾದರೂ ಮುಂದಿನ ಪ್ರಕ್ರಿಯೆಗಳು ಸಾಗಲಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಮಹಾರಾಷ್ಟ್ರದ ನಾಗಪುರದ ನ್ಯಾಷನಲ್ ಕಾನೂನು ವಿಶ್ವವಿದ್ಯಾಲಯದ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ವಿವಿಧ ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಹೀಗಾಗಿ ಯಾವ ಭಾಷೆಯಲ್ಲಿ ವ್ಯವಹರಿಸಬೇಕು ಎಂಬ ಗೊಂದಲ ಸದಾ ಕಾಡುತ್ತಿರುತ್ತದೆ ಎಂದು ತಿಳಿಸಿದರು.
ರಾಜ್ಯದ ಹಲವೆಡೆ ಸಿಡಿಲಿಗೆ ನಾಲ್ವರು ಬಲಿ: ಇನ್ನೂ 4 ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಇದೆಲ್ಲವನ್ನು ಮನಗಂಡೇ ಡಾ. ಬಿ.ಆರ್. ಅಂಬೇಡ್ಕರ್ ರವರು ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿಸಲು ಒಲವು ತೋರ್ಪಡಿಸಿದ್ದರು. ಈ ಕಾರಣಕ್ಕೆ ಅವರು ಪ್ರಸ್ತಾವನೆಯನ್ನು ಸಿದ್ದಪಡಿಸಿದ್ದು, ಇದಕ್ಕೆ ಸರ್ವಧರ್ಮಗಳ ನಾಯಕರು ಒಪ್ಪಿಗೆ ಸೂಚಿಸಿದ್ದರು. ಆದರೆ ಇದು ಮಂಡನೆ ಆದರೂ ಸಹ ಮುಂದಿನ ಪ್ರಕ್ರಿಯೆಗಳು ನಡೆಯಲಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹೇಳಿದರು.