ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಳತೂರು ಗ್ರಾಮದಲ್ಲಿ ಫ್ಲೆಕ್ಸ್ ಗೆ ಬೆಂಕಿ ಹಾಕಿದ ಆರೋಪದ ಮೇಲೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
‘ಮಹಾನಾಯಕ’ ಅಂಬೇಡ್ಕರ್ ಧಾರಾವಾಹಿ ಫ್ಲೆಕ್ಸ್ ಅನ್ನು ಗ್ರಾಮದಲ್ಲಿ ಹಾಕಲಾಗಿದ್ದು, ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗ್ರಾಮದ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಚರಿಸಲು ತಯಾರಿ ಮಾಡಿಕೊಂಡಿದ್ದರು. ಆದರೆ, ಬುಧವಾರ ಬೆಳಗಿನ ಜಾವ ಬೆಂಕಿ ಹಾಕಿರುವುದು ಗೊತ್ತಾಗಿದೆ.
ಪಟ್ಟಣದ ಪೊಲೀಸ್ ಠಾಣೆಗೆ ಸಂಘದ ಪದಾಧಿಕಾರಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುನ್ನೆಚ್ಚರಿಕೆಯಿಂದ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.