ಮುಂಬೈ: ಮುಂಬೈ ಉಪನಗರ ಅಂಧೇರಿಯ ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ಕೊರೋನಾ ಸೋಂಕಿತ ಮಹಿಳೆ ಬಳಿ ಲೈಂಗಿಕಕ್ರಿಯೆಗೆ ಬೇಡಿಕೆ ಇಟ್ಟಿದ್ದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಸೋಮವಾರ ಸಂತ್ರಸ್ತೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದ್ದ ಮಹಿಳೆ ಅಂಧೇರಿಯ ಎಂಐಡಿಸಿ ಪ್ರದೇಶದ ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಆರೋಗ್ಯ ಕಾರ್ಯಕರ್ತ ಮಹಿಳೆ ಬಳಿ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಅಲ್ಲದೇ, ಲೈಂಗಿಕ ಕ್ರಿಯೆಗೆ ಬಲವಂತ ಮಾಡಿದ್ದಾನೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಬುಧವಾರ ಐಪಿಸಿ ಸೆಕ್ಷನ್ 354 ಅಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ. 14 ದಿನ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.