alex Certify ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರಿಕ್ಷೆಯ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಪ್ರಕಟಣೆ ಮಾಡಲಾಗಿದೆ.‌ ಆಗಸ್ಟ್ 19ರಂದು ಈ ಚಿತ್ರ ತೆರೆಮೇಲೆ ಬರಲಿದೆ.

ಕಿಚ್ಚ ಸುದೀಪ್ ಅಭಿಮಾನಿಗಳು ಈ ವಿಚಾರ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ನಲ್ಲಿ ಈ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ.

ಅನೂಪ್ ಭಂಡಾರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ಅವರ ಸ್ನೇಹಿತ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಈ ಹಿಂದೆ ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಬಂದು 25 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ʼವಿಕ್ರಾಂತ್ ರೋಣʼ ಚಿತ್ರದ ಟೈಟಲ್ ಲೋಗೋವನ್ನು ರಿಲೀಸ್ ಮಾಡಲಾಗಿತ್ತು. ಹಾಗೂ ಕಿಚ್ಚ ಸುದೀಪ್ ಅವರ ಸಿನಿ ಜರ್ನಿಯ ವಿಡಿಯೋವೊಂದನ್ನು ತೋರಿಸಿದ್ದರು.

ನಿರೂಪ್ ಭಂಡಾರಿ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸುತ್ತಲೇ ಇದೆ.

https://www.instagram.com/p/CNrQJTtncCG/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...