ಸಿಬಿಎಸ್ಇ ಪರೀಕ್ಷೆ ಬಗ್ಗೆ ಇದ್ದ ಅನುಮಾನ ಕೊನೆಗೊಂಡಿದೆ. ಕೊರೊನಾ ವೈರಸ್ ಸೋಂಕಿನಿಂದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಮತ್ತು ಪ್ರಧಾನಿ ನರೇಂದ್ರ ಮೋದಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಸಿಬಿಎಸ್‌ಇ 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು 2021 ರಲ್ಲಿ ರದ್ದು ಮಾಡಲು ನಿರ್ಧರಿಸಲಾಗಿದೆ. 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮಂಡಳಿ ಹಾಗೂ ಸರ್ಕಾರದ ನಿರ್ಧಾರ ಅನೇಕ ಪಾಲಕರಿಗೆ ತೃಪ್ತಿ ನೀಡಿದೆ. ಆದ್ರೆ 10ನೇ ತರಗತಿಯಂತೆ 12ನೇ ತರಗತಿ ಪರೀಕ್ಷೆಯನ್ನು ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನೆ ಮಾಡಲಾಗ್ತಿದೆ. 12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ರೆ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ. ಮುಂದಿನ ತರಗತಿ ಪ್ರವೇಶಕ್ಕೆ ತೊಂದರೆಯಾಗಲಿದೆ.
ಬಹುತೇಕ ಕಾಲೇಜುಗಳಲ್ಲಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 12ನೇ ತರಗತಿ ಪರೀಕ್ಷೆ ಫಲಿತಾಂಶ ಮುಖ್ಯವಾಗುತ್ತದೆ. 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವುದ್ರಿಂದಲೂ ಮುಂದಿನ ಕ್ಲಾಸಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.