ಕೊರೊನಾ ಎರಡನೇ ಅಲೆ ದೇಶದಾದ್ಯಂತ ಆರ್ಭಟಿಸುತ್ತಿದ್ದು, ಇದರ ಹೊಡೆತಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಕೂಡಾ ತತ್ತರಿಸಿ ಹೋಗಿದೆ.
ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹತ್ವದ ತೀರ್ಮಾನ ಕೈಗೊಂಡಿದ್ದು, ವೀಕೆಂಡ್ ಲಾಕ್ ಡೌನ್ ಘೋಷಿಸಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಲಿದೆ.
ವೀಕೆಂಡ್ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಲಿವೆ.
ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ವೀಕೆಂಡ್ ಲಾಕ್ ಡೌನ್ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.