
ನ್ಯೂಜಿಲ್ಯಾಂಡ್ ತಂಡದ ಅತ್ಯುತ್ತಮ ನಾಯಕನಾದ ಕೇನ್ ವಿಲಿಯಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಣಕ್ಕಿಳಿಯದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ಸಾಕಷ್ಟು ಅನುಭವವನ್ನು ಹೊಂದಿರುವ ಕೇನ್ ವಿಲಿಯಮ್ಸನ್ ಎಂತಹ ಸಮಯದಲ್ಲೂ ತಂಡದ ಪರ ಉತ್ತಮ ಪ್ರದರ್ಶನ ತೋರುವ ಸಾಮರ್ಥ್ಯ ಹೊಂದಿದ್ದಾರೆ. ಕೇನ್ ವಿಲಿಯಮ್ಸನ್ ಅವರನ್ನು ತಂಡಕ್ಕೆ ಇನ್ನು ಕರೆದುಕೊಳ್ಳದೇ ಇರುವುದಕ್ಕೆ ಸನ್ ರೈಸರ್ಸ್ ಹೈದರಾಬಾದ್ ಫ್ಯಾನ್ಸ್ ಗಳು ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐಪಿಎಲ್ ರ್ಯಾಕಿಂಗ್ ಪಟ್ಟಿಯಲ್ಲಿ ಆರ್ಸಿಬಿ ಕಮಾಲ್: ಮೀಮ್ಸ್ ಸುರಿಮಳೆ ಹರಿಸಿದ ಅಭಿಮಾನಿಗಳು
ಈ ಕುರಿತು ಮೊದಲ ಪಂದ್ಯದ ಬಳಿಕ ಮಾತನಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಟ್ರೆವರ್ ಬೇಲಿಸ್, ಮ್ಯಾಚ್ ಫಿಟ್‌ನೆಸ್ ಪಡೆಯುವ ವಿಚಾರದಲ್ಲಿ ಕೇನ್ ವಿಲಿಯಮ್ಸನ್ ಗೆ ಕೆಲವು ದಿನಗಳು ಬೇಕಾಗುತ್ತದೆ. ಕೆಲ ಪಂದ್ಯಗಳ ಬಳಿಕ ವಿಲಿಯಮ್ಸನ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದರು. ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಎರಡು ಪಂದ್ಯಗಳನ್ನಾಡಿದ್ದು, ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದೆ.