
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಯಡಿಯೂರಪ್ಪ ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಸಿಎಂ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅಗತ್ಯವಾದ ಪರೀಕ್ಷೆಗಳನ್ನು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.