ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದುಪಡಿಸಿದ್ದು 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಐಸಿಎಸ್ಸಿ ಪರೀಕ್ಷೆ ಕೂಡ ಮುಂದೂಡಲ್ಪಟ್ಟಿದೆ.
ಹೀಗಾಗಿ ಕರ್ನಾಟಕದಲ್ಲೂ ಸಹ 10 ಮತ್ತು 12ನೇ ತರಗತಿ ಪರೀಕ್ಷೆಗಳು ನಡೆಯುತ್ತದೋ ಇಲ್ಲವೋ ಎಂಬ ಗೊಂದಲ ವಿದ್ಯಾರ್ಥಿ ಹಾಗೂ ಪೋಷಕರನ್ನು ಕಾಡುತ್ತಿದೆ. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಸಾರ್ವಜನಿಕರೇ ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಜೂನ್ 21 ಕ್ಕೆ ನಿಗದಿಯಾಗಿದೆ. ಇದಕ್ಕೆ ಇನ್ನೂ ಬಹಳಷ್ಟು ಕಾಲಾವಕಾಶವಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ 10 ಮತ್ತು 12ನೇ ಪರೀಕ್ಷೆ ನಡೆಸಲು ಯಾವುದೇ ಅಡ್ಡಿಯಿಲ್ಲ ಎಂದು ತಿಳಿಸಿದ್ದಾರೆ