ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,34,692 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 1,341 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,75,649 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 16,79,740 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,26,71,220 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,23,354 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 14,95,397 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 26,49,72,022 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 11,99,37,641 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.