ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯ/ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾದ ನಗದು, ಮದ್ಯ, ಡ್ರಗ್ಸ್ಗಳ ಮೊತ್ತ ಬರೋಬ್ಬರಿ 1000 ಕೋಟಿ ರೂಪಾಯಿಯನ್ನೂ ಮೀರಿದೆ. ಈ ಮೊತ್ತವು 2016ರಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ವಸ್ತುಗಳ ಒಟ್ಟು ಮೌಲ್ಯವನ್ನ ಮೀರಿದೆ. 2016ರಲ್ಲಿ 226 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿತ್ತು.
ಐದು ರಾಜ್ಯಗಳಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ವಸ್ತುಗಳ ಮೊತ್ತ 2016ಕ್ಕೆ ಹೋಲಿಸಿದ್ರೆ 343 ಪ್ರತಿಶತ ಏರಿಕೆ ಕಂಡಿದೆ. ಕೇವಲ ಪಶ್ಚಿಮ ಬಂಗಾಳದಲ್ಲೊಂದರಲ್ಲೇ 300 ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಸ್ತು ವಶಪಡಿಸಿಕೊಳ್ಳಲಾಗಿದೆ. 2016ರಲ್ಲಿ 44 ಕೋಟಿ ರೂ. ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿತ್ತು.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ತಮಿಳುನಾಡಿನಲ್ಲಿ 446 ಕೋಟಿ ರೂಪಾಯಿ ಮೌಲ್ಯದ ಸ್ವತ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ಅದರಂತೆ ಅಸ್ಸಾಂನಲ್ಲಿ 122 ಕೋಟಿ ರೂ., ಕೇರಳ 85 ಕೋಟಿ ರೂ. ಹಾಗೂ ಪುದುಚೇರಿಯಲ್ಲಿ 37 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.
ಪಶ್ಚಿಮ ಬಂಗಾಳದಲ್ಲಿ 51 ಕೋಟಿ ರೂಪಾಯಿ ನಗದು, 30 ಕೋಟಿ ರೂಪಾಯಿ ಮೌಲ್ಯದ ಮದ್ಯ, 119 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್, 12 ಕೋಟಿ ರೂಪಾಯಿ ಮೌಲ್ಯದ ಬೆಲೆಬಾಳುವ ಲೋಹ , ಇತರೆ 88 ಕೋಟಿ ರೂ. ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
ತಮಿಳುನಾಡಿನಲ್ಲಿ ಅತಿ ಹೆಚ್ಚು ನಗದು (237 ಕೋಟಿ ರೂ. ) ಆಸ್ಸಾಂನಲ್ಲಿ ಅತಿ ಹೆಚ್ಚು ಮೌಲ್ಯದ ಮದ್ಯ (42 ಕೋಟಿ ರೂ.), ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಡ್ರಗ್ಸ್ (119 ಕೋಟಿ ರೂ.) ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮೌಲ್ಯದ ಗೃಹ ಬಳಕೆ ಸೇರಿದಂತೆ ಇತರೆ ವಸ್ತುಗಳು (88 ಕೋಟಿ ರೂ. ) ಹಾಗೂ ತಮಿಳುನಾಡಿನಲ್ಲಿ ಅತಿ ಹೆಚ್ಚು ಮೌಲ್ಯದ ಬೆಲೆ ಬಾಳುವ ಲೋಹ (176 ಕೋಟಿ ರೂ. )ಗಳನ್ನ ವಶಕ್ಕೆ ಪಡೆಯಲಾಗಿದೆ.