ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಬಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಕೊರೋನಾ ಸ್ಥಿತಿಗತಿ ಮತ್ತು ಲಸಿಕೆ ಲಭ್ಯತೆ ಕುರಿತಾಗಿ ಪ್ರಧಾನಿ ಸಭೆ ನಡೆಸಲಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ದೇಶದಲ್ಲಿ ಕೊರೋನಾ ಎರಡನೆಯ ಅಲೆ ಭಾರಿ ಆತಂಕವನ್ನು ಸೃಷ್ಟಿಸಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ಸದ್ಯದ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರೊಂದಿಗೆ ಮೋದಿ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಸಂವಾದ ನಡೆಸಿದ್ದಾರೆ. ದೇಶದಲ್ಲಿ ಸೋಂಕು ತೀವ್ರ ಏರಿಕೆ ಕಂಡಿದೆ. ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಹೊಸ ಪ್ರಕರಣ ವರದಿಯಾಗುತ್ತಿದ್ದು, ಆಕ್ಸಿಜನ್ ಕೊರತೆ ಕಂಡುಬಂದಿದೆ. ಲಸಿಕೆ ಮತ್ತು ಜೀವರಕ್ಷಕ ರೆಮ್ ಡಿಸಿವರ್ ಕೊರತೆ ಕಂಡುಬಂದಿದ್ದು, ಮಹಾರಾಷ್ಟ್ರ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಉತ್ತರಾಖಂಡ್, ಹಿಮಾಚಲ ಪ್ರದೇಶ, ಪಶ್ಚಿಮಬಂಗಾಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೋವಿಡ್ ತೀವ್ರ ಏರಿಕೆ ಹಿನ್ನಲೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗುವುದು.