ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,61,500 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 1,501 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,77,150ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ
ಇನ್ನು ದೇಶದಲ್ಲಿ 18,01,316 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,28,09,643 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,38,423 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 15,66,394 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 26,65,38,416 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 12,26,22,590 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.