alex Certify ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆಗೆ ಲೈಂಗಿಕ ಕಿರುಕುಳ: ಪ್ರಶ್ನಿಸಿದ ಕುಟುಂಬದವರ ಮೇಲೆ ಸಿಬ್ಬಂದಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆಗೆ ಲೈಂಗಿಕ ಕಿರುಕುಳ: ಪ್ರಶ್ನಿಸಿದ ಕುಟುಂಬದವರ ಮೇಲೆ ಸಿಬ್ಬಂದಿ ಹಲ್ಲೆ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಂಪು ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಮಹಿಳೆ ವೈದ್ಯಕೀಯ ಸೌಲಭ್ಯ ಪಡೆಯಲು ದಾಖಲಾಗಿದ್ದು, ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ.

ಶನಿವಾರ ವಾರ ಮಹಿಳೆಗೆ ಹಲವು ಬಾರಿ ವಾರ್ಡ್ ಬಾಯ್ ಕಿರುಕುಳ ನೀಡಿದ್ದಾನೆ. ನಂತರ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಗೆ ಎಚ್ಚರವಾದಾಗ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಕುಟುಂಬ ಸದಸ್ಯರು ವಾರ್ಡ್ ಬಾಯ್ ಕೃತ್ಯದ ಬಗ್ಗೆ ಆಸ್ಪತ್ರೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಕ್ರಮ ಕೈಗೊಳ್ಳುವ ಬದಲು ಆಸ್ಪತ್ರೆಯ ಸಿಬ್ಬಂದಿ ಮಹಿಳೆಯ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಮಹಿಳೆಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಮಹಿಳೆಯ ಮಾವ ಆರೋಪಿಸಿದ್ದಾರೆ.

ಕಾಂಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದೂರಿನ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...