alex Certify ಕೊರೊನಾ ಮೊದಲ ಹಾಗೂ ಎರಡನೇ ಅಲೆ ನಡುವಿನ ವ್ಯತ್ಯಾಸ ವಿವರಿಸಿದ ICMR ಮಹಾನಿರ್ದೇಶಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮೊದಲ ಹಾಗೂ ಎರಡನೇ ಅಲೆ ನಡುವಿನ ವ್ಯತ್ಯಾಸ ವಿವರಿಸಿದ ICMR ಮಹಾನಿರ್ದೇಶಕ

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಕೈಮೀರಿ ಹೋಗುತ್ತಿದೆ. ಸಾಕಷ್ಟು ಮುಂಜಾಗ್ರತಾ ಕ್ರಮಗಳ ಬಳಿಕವೂ ಕೋವಿಡ್​ ಸೋಂಕನ್ನ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಈ ಅಂಶಗಳನ್ನ ಗಮನದಲ್ಲಿಟ್ಟುಕೊಂಡು ICMR ​ ಮಹಾನಿರ್ದೇಶಕ ಡಾ. ಬಲರಾಂ ಭಾರ್ಗವ ಕೊರೊನಾ ಮೊದಲ ಅಲೆಗೂ ಹಾಗೂ ಎರಡನೇ ಅಲೆಗೂ ಇರುವ ವ್ಯತ್ಯಾಸಗಳನ್ನ ವಿವರಿಸಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರಲ್ಲಿ ಲಕ್ಷಣಗಳು ಕಡಿಮೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚಿದೆ. ಕೊರೊನಾ ಮೊದಲ ಅಲೆಯಲ್ಲಿ ಒಣ ಕೆಮ್ಮು, ಸಂಧಿ ನೋವು ಹಾಗೂ ತಲೆನೋವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದೆ ಡಾ. ಭಾರ್ಗವ ಹೇಳಿದ್ದಾರೆ.

ಆದರೆ ಮೊದಲ ಅಲೆ ಹಾಗೂ ಎರಡನೇ ಅಲೆಯಲ್ಲಿ ಕೊರೊನಾ ಸಾವಿನ ಪ್ರಮಾಣದಲ್ಲಿ ಯಾವುದೇ ಬದಲಾವಣೆ ಉಂಟಾಗಿಲ್ಲ ಅಂತಾ ಭಾರ್ಗವ್​ ಹೇಳಿದ್ದಾರೆ. ಕೊರೊನಾ ಮೊದಲ ಅಲೆಯಲ್ಲಿ ಸರಾಸರಿ 50 ವರ್ಷದವರು ಹೆಚ್ಚಾಗಿ ತುತ್ತಾಗಿದ್ದರು. ಪ್ರಸ್ತುತ ಅಲೆಯಲ್ಲಿ ವೃದ್ಧರು ಆಸ್ಪತ್ರೆಗೆ ಹೆಚ್ಚಾಗಿ ದಾಖಲಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಸಿಂಪ್ಟೋಮ್ಯಾಟಿಕ್​ ಅಥವಾ ಸೌಮ್ಯ ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಅಲ್ಲದೇ ಕೊರೊನಾ ಎರಡನೇ ಅಲೆಯಲ್ಲಿ ವೆಂಟಿಲೇಟರ್​ಗೆ ಹೋಗುತ್ತಿರುವವರ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...