ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 15,785 ಜನರಿಗೆ ಕೊರೊನಾ ಸೋಂಕು ತಗಲಿದೆ. ಇವತ್ತು ಒಂದೇ ದಿನ 146 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,497 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 7098 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 10,21,250 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,76,850 ಕ್ಕೆ ಏರಿಕೆಯಾಗಿದೆ.
721 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,42,084 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 9618 ಜನರಿಗೆ ಸೋಂಕು ತಗಲಿದ್ದು, ಇವತ್ತು ಒಂದೇ ದಿನ ಬರೋಬ್ಬರಿ 97 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 1,03,178 ಸಕ್ರಿಯ ಪ್ರಕರಣಗಳು ಇವೆ.