ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ರಮೇಶ್ ಜಾರಕಿಹೊಳಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಮ್ಮೆ ಮಾತ್ರ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ಬಳಿಕ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಚಿಕಿತ್ಸೆ ಬಳಿಕ ಇದೀಗ ಕೊವಿಡ್ ನೆಗೆಟಿವ್ ಬಂದಿದೆ. ಆದರೂ ಕೂಡ ವಿಚಾರಣೆಯಿಂದ ದೂರ ಇರಲು ನಿರ್ಧರಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೋನಾದಿಂದ ಆಸ್ಪತ್ರೆಗೆ ದಾಖಲು
ಇನ್ನು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಗೋಕಾಕ್ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದೂ ಕೂಡ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿದುಬಂದಿದೆ.