ಬೆಂಗಳೂರು: ಕಳೆದ ವರ್ಷದ ಕೊರೊನಾ ಲಾಕ್ ಡೌನ್ ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಮತ್ತೆ ಕೊರೊನಾಘಾತವಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿನಿಂದಾಗಿ ಚಿತ್ರಮಂದಿರದತ್ತ ಜನರು ಮುಖವನ್ನೂ ಮಾಡುತ್ತಿಲ್ಲ. ಈ ಹಿನ್ನೆಲೆಯಲಿ ಚಿತ್ರಮಂದಿರಗಳನ್ನೇ ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆ.
ಈ ಕುರಿತು ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ಚಂದ್ರಶೇಖರ್ ಮಾಹಿತಿ ನೀಡಿದ್ದು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ 650 ಚಿತ್ರಮಂದಿರಗಳು ಮುಚ್ಚಿವೆ. ಥಿಯೇಟರ್ ಗಳು ತೀವ್ರ ನಷ್ಟ ಅನುಭವಿಸುತ್ತಿವೆ. ಹೀಗಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಹೊಸ ಅಧ್ಯಯನದಲ್ಲಿ ಬಯಲಾಗಿದೆ ʼಮಾಸ್ಕ್ʼ ಕುರಿತ ಕುತೂಹಲಕಾರಿ ಮಾಹಿತಿ
ಥಿಯೇಟರ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಿದ್ದರೂ. ಪ್ರೇಕ್ಷರು ಚಿತ್ರಮಂದಿರಗಳತ್ತ ಸುಳಿಯುತ್ತಿಲ್ಲ. ಈಗಾಗಲೇ ಯುವರತ್ನ ಹಾಗೂ ಕೃಷ್ಣ ಟಾಕೀಸ್ ಸಿನಿಮಾಗಳು ಚಿತ್ರಮಂದಿರಗಳಲ್ಲಿದೆ. ಆದರೆ ಯಾವುದೇ ಉತ್ತಮ ರೆಸ್ಪಾನ್ಸ್ ಸಿಗುತ್ತಿಲ್ಲ. ಹೊಸ ಚಿತ್ರಗಳ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಚಿತ್ರಮಂದಿರಗಳು ನಷ್ಟದಲ್ಲಿವೆ. ಹಾಗಾಗಿ ಪ್ರದರ್ಶಕರ ವಲಯದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.