ಕಾರವಾರ ಜೋಯಿಡಾ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅವರನ್ನು ಹತ್ಯೆ ಮಾಡಿದ ಮುಂಬೈ ಮೂಲದ ಶಾರ್ಪ್ ಶೂಟರ್ ಸಂಜಯ್ ಮೋಹಿತೆ ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.
ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅವರನ್ನು ಹತ್ಯೆ ಮಾಡಿದ ಮುಂಬೈ ಮೂಲದ ಮೋಹಿತೆಗೆ ಜೀವಾವಧಿ ಶಿಕ್ಷೆ ಮತ್ತು 68 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಫೆಬ್ರವರಿ 19, 2000 ರಲ್ಲಿ ಕಾರವಾರದ ದೈವಜ್ಞ ಭವನ ಎದುರು ವಸಂತ್ ಆಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿತ ದಿಲೀಪ್ ನಾಯಕ್ 2004ರಲ್ಲಿ ಹತ್ಯೆಯಾಗಿದ್ದು, ಉಳಿದ ಆರೋಪಿಗಳಾದ ಆಂತೋನಿ ಮತ್ತು ಬಾಬು ಮುಂಬೈ ಪೊಲೀಸರ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದರು. ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ವಿಚಾರಣೆ ಆಲಿಸಿ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಸುನಂದಾ ಮಡಿವಾಳರ ಅವರು ವಾದ ಮಂಡಿಸಿದ್ದರು.