ನವದೆಹಲಿ: ಕೈಗಾರಿಕೆಗಳಿಗೆ ಆಮ್ಲಜನಕ ಬಳಕೆ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದ್ದು ತಕ್ಷಣದಿಂದ ಆದೇಶ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೈಗಾರಿಕೆಗಳು ಕಾಯಬಹುದು, ಆದರೆ ರೋಗಿಗಳು ಕಾಯಲು ಸಾಧ್ಯವಿಲ್ಲ. ಮನುಷ್ಯನ ಜೀವ ಅಪಾಯದಲ್ಲಿದೆ ಎಂದು ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿ ಅವರ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ಕೈಗಾರಿಕೆಗಳಿಗೆ ಆಮ್ಲಜನಕ ಸ್ಥಗಿತಗೊಳಿಸುವ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಅನೇಕ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಏರಿಕೆಯಿಂದ ಆಕ್ಸಿಜನ್ ಕೊರತೆ ಕಂಡು ಬಂದಿದೆ. ಹಾಗಾಗಿ ಕೈಗಾರಿಕೆಗಳ ಉದ್ದೇಶಕ್ಕಾಗಿ ಆಮ್ಲಜನಕ ಸರಬರಾಜು ಮಾಡುವುದನ್ನು ನಿಷೇಧಿಸುವಂತೆ ತಿಳಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ತೀವ್ರ ಸೋಂಕಿತರ ವೈದ್ಯಕೀಯ ಚಿಕಿತ್ಸೆಯಲ್ಲಿ ಆಮ್ಲಜನಕ ಬಳಕೆ ಮಾಡಲಾಗುತ್ತದೆ. ಆದರೆ, ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಕೊರತೆ ಕಂಡು ಬಂದಿದೆ.