ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿ ಏಪ್ರಿಲ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ಮೈಸೂರು, ತುಮಕೂರು, ಚಿತ್ರದುರ್ಗ ಭಾಗದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.